Mysore
22
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ತರುಣ್ ಮುರುಳಿಧರ್ ಆಯ್ಕೆ

ಮಡಿಕೇರಿ: ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರುಳಿಧರ್ ರವರು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್ ಎ ಮುರುಳಿಧರ್, ಸರಿತಾ ದಂಪತಿಗಳ ಪುತ್ರನಾಗಿರುವ ತರುಣ್ ಅವರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಆಟಗಾರ ಹಾಗೂ ನಾವು ಪ್ರತಿಷ್ಠಾನ ಸಂಸ್ಥಾಪಕ ಗೌತಮ್ ತಿರ್ಗಂಧೂರ್ ಅವರು ಶಾಲಾ ಹಂತದಲ್ಲಿ ತರಬೇತಿ ನೀಡಿದ್ದರು.

ಕರ್ನಾಟಕ ವಿದ್ಯಾಭಾರತಿ ಸಂಸ್ಥೆಯು ಬೆಂಗಳೂರಿನ ಜೈ ಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಫೈನಲ್ ನಲ್ಲಿ ಬೆಂಗಳೂರು ಜಿಲ್ಲಾ ತಂಡವನ್ನು ಪರಾಭವ ಗೊಳಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಮಂಗಳೂರಿನ ಶಕ್ತಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ತರುಣ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಕೊಡಗಿನ ಸೋಮವಾರಪೇಟೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಸಪ್ಟೆಂಬರ್ 27ರಂದು ದೆಹಲಿಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಇವರು ಇದೀಗ ಆಯ್ಕೆಯಾಗಿದ್ದಾರೆ.

Tags:
error: Content is protected !!