Mysore
20
overcast clouds
Light
Dark

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್‌ ಪಲ್ಟಿ

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್‌ ಸಾರಿಗೆ ಬಸ್‌ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ ಘಟನೆ ಸುಂಟಿಕೊಪ್ಪ ಸಮೀಪದಲ್ಲಿ ಇಂದು ಬೆಳಿಗ್ಗೆ (ಆ.2) ನಡೆದಿದೆ.

ಎಲೆಕ್ಟಿಕ್ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ  ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಮಗುಚಿಕೊಂಡಿದೆ. ಘಟನೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.