Mysore
21
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಡಿಕೇರಿ | ವಿವಿ ಮುಚ್ಚಲ್ಲ, ವಿಲೀನ ಅಷ್ಟೆ ; ʻಡಿಕೆಶಿʼ ಸ್ಪಷ್ಟನೆ

ಮಡಿಕೇರಿ : ಯಾವುದೇ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ ಮಕ್ಕಳ ಭವಿಷ್ಯ ದೃಷ್ಟಿಯಿಂದ ಈಗಿರುವ ವಿಶ್ವವಿದ್ಯಾಲಯದೊಂದಿಗೆ ವಿಲೀನ ಪ್ರಕ್ರಿಯೆ ನಡೆಸಲು ಚಿಂತನ ಹರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಶುಕ್ರವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕೊಡಗು ವಿಶ್ವವಿದ್ಯಾಲಯ ಸಂಬಂಧಿಸಿದಂತೆ ಮಕ್ಕಳ ಅಭಿಪ್ರಾಯವನ್ನು ಸಂಗ್ರಹಿಸುವ ಅಭಿಯಾನವನ್ನು ಈಗಾಗಲೇ ಆರಂಭಿಸಲಾಗಿದೆ. ಅವರ ಅಭಿಪ್ರಾಯವನ್ನು ಕೇಂದ್ರೀಕರಿಸಿ ಸಂಪುಟದ ಮುಂದಿಟ್ಟು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ವಿಶ್ವವಿದ್ಯಾಲಯದ ಬಗ್ಗೆ ಹೆಚ್ಚು ಒಲವು ಇರುವುದರಿಂದ, ಈ ಹಿಂದೆ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು ಇತರ ಹೆಸರುಗಳಿಸಿದ ವಿಶ್ವವಿದ್ಯಾಲಯದೊಂದಿಗೆ ಸೇರ್ಪಡಿಗೊಳಿಸುವುದು ನಮ್ಮ ಚಿಂತನೆಯಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇರುವ ಸಿಬ್ಬಂದಿಗಳು ಕೊಡಗು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದದರಿಂದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ವಿಲೀನ ಪ್ರಕ್ರಿಯೆಗೆ ಚಿಂತನೆ ಹರಿಸಲಾಗಿದೆ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

Tags:
error: Content is protected !!