ಕೊಡಗು

ಮಡಿಕೇರಿ| ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿರುವ ಜಲಪಾತಗಳು

ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ ಕರಿಕೆ ಈಗ ಪ್ರವಾಸಿಗರ ಹಾಟ್‌ಸ್ಪಾಟ್ ಆಗಿದೆ.

ಭಾಗಮಂಡಲ – ಕರಿಕೆ ಅಂತರ್ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹರಿಯುತ್ತಿರುವ ಹತ್ತಾರು ಝರಿಗಳು, ಸುತ್ತಲೂ ಮನಮೋಹಕ ನೈಸರ್ಗಿಕ ಸೊಬಗು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಈ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಎಲ್ಲೆಡೆ ಹಸಿರಿನಿಂದ ಕಂಗೊಳಿಸುತ್ತಿದೆ. ಕರಿಕೆ ಜಲಪಾತಗಳು ತುಂಬಿ ಧುಮ್ಮಿಕ್ಕುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಈ ಬಾರಿ ವರುಣ ಮೇ ಅಂತ್ಯದಿಂದಲೇ ಬಿರುಸುಗೊಂಡಿದ್ದು, ಅವಧಿಗೂ ಮುನ್ನವೇ ಉತ್ತಮ ಮಳೆಯಾಗಿದೆ. ಇದರಿಂದ ನೀರಿಲ್ಲದೆ ಕಳೆಗುಂದಿದ್ದ ಜಲ ಕನ್ಯೆಯರು ಮೈದುಂಬಿ ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿವೆ. ಪ್ರಕೃತಿಯ ಹಚ್ಚ ಹಸಿರಿನ ಸುಂದರ ತಾಣ ಬ್ರಹ್ಮಗಿರಿ ಬೆಟ್ಟದ ತಪ್ಪಲಿನ ತಲಕಾವೇರಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ೨೦ಕ್ಕೂ ಅಧಿಕ ಜಲಪಾತಗಳು ಹಾಲ್ನೊರೆ ಸೂಸುತ್ತಿವೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

1 hour ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

1 hour ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

1 hour ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

1 hour ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

2 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

3 hours ago