ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ.
ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕಿ, ಪಕ್ಷದ ಪರ ಘೋಷಣೆಮೊಳಗಿಸಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡರಾದ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ.ಪಂ.ಅಧ್ಯಕ್ಷರು, ಸದಸ್ಯರು ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.