ಕೊಡಗು

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಯುವಕ ಆತ್ಮಹತ್ಯೆ

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ.

ಎಚ್.ಕೆ.ಸುಮಂತ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸುಮಂತ್‌ಗೆ ಕೆಲವು ವರ್ಷಗಳ ಹಿಂದೆ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಯನ್ನು ಪ್ರೀತಿ ಮಾಡುತ್ತಿದ್ದ ಸುಮಂತ್‌, ಆಕೆಯನ್ನು ಮದುವೆ ಆಗುವಂತೆ ಕಾಟ ಕೊಡುತ್ತಿದ್ದ ಎನ್ನಲಾಗಿದೆ. ಆದರೆ ಆಕೆ ಇದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಂತ್‌ ಆರು ತಿಂಗಳ ಹಿಂದೆ ಕೆಲಸ ಬಿಟ್ಟು ಬಂದಿದ್ದ. ಪ್ರೀತಿಸಿದ ಹುಡುಗಿಯ ಲಗ್ನಪತ್ರಿಕೆ ನೀಡಿದ ಆತನಿಗೆ ಹುಡುಗಿ ಮದುವೆ ನಿಗದಿಯಾದ ದಿನಾಂಕ ಗೊತ್ತಾಗಿದೆ.

ಅಕ್ಟೋಬರ್.‌18ರಂದೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸುಮಂತ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಮಂತ್‌ ಮೃತಪಟ್ಟಿದ್ದಾನೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

14 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago