ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಬಲಮುರಿ ಗ್ರಾಮದ ವಾಟೆಕಾಡು ಪೈಸಾರಿ ನಿವಾಸಿ ಕೂಲಿ ಕಾರ್ಮಿಕರಾದ ರಂಜು ಮತ್ತು ಪುಷ್ಪ ದಂಪತಿಯ ಪುತ್ರ ಪುನೀತ್ (21) ಮೃತಪಟ್ಟ ಯುವಕ. ಭಾನುವಾರ ಮಧ್ಯಾಹ್ನ ನಾಲ್ವರು ಹುಡುಗರ ತಂಡ ಬಲಮುರಿ ಕಾವೇರಿ ನದಿ ಸೇತುವೆಯ ಸಮೀಪ ಸ್ನಾನ ಮಾಡಲು ತೆರಳಿದ್ದರು. ಪುನೀತ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಳಿಕ ಬಲಮುರಿ ನಿವಾಸಿ ಮುಳುಗು ತಜ್ಞ ಎಂ.ಆರ್.ಬಿಪಿನ್ ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಮೇಲೆತ್ತಿದ್ದಾರೆ.
ನಾಪೋಕ್ಲು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…