ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ ಸಿಮೆಂಟ್ ಕಾಲಿ ಚೀಲಗಳನ್ನು ಎಲ್ಲೆಂದರಲ್ಲಿ ಬಿಸಾಡಿರುವುದು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಮಾರು 2500ಕ್ಕೂ ಅಧಿಕ ಸಿಮೆಂಟ್ ಚೀಲಗಳನ್ನು ರಸ್ತೆ ಬದಿಗಳು, ಹೊಲಗಳ ಅಂಚುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರಿಂದ ಪರಿಸರ ಹಾನಿಯಾಗುವುದರ ಜೊತೆಗೆ ಗ್ರಾಮ ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಪುಕಾರು ಸಲ್ಲಿಸಿದ್ದು, ತಕ್ಷಣ ಕ್ರಮ ಕೈಗೊಂಡು ಗುತ್ತಿಗೆದಾರರಿಂದ ಈ ತ್ಯಾಜ್ಯವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಭವಿಷ್ಯದಲ್ಲಿ ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇದೀಗ ಈ ವಿಚಾರ ಮತ್ತೊಂದು ವಿವಾದಕ್ಕೂ ಕಾರಣವಾಗಿದೆ. ಪಂಚಾಯಿತಿಗೆ ಸೇರಿದ ಕಸ ವಿಲೇವಾರಿ ವಾಹನವನ್ನು ಸಾರ್ವಜನಿಕ ಸೇವೆಗೆ ಬಳಸದೆ, ಒಂದು ಕಾಂಟ್ರಾಕ್ಟರ್ ರಸ್ತೆ ಕಾಮಗಾರಿಯ ವೇಳೆ ರಸ್ತೆ ಬದಿಯಲ್ಲಿ ಹಾಕಿದ ಸಿಮೆಂಟ್ ಚೀಲಗಳನ್ನು ಸಾಗಿಸಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿದ್ದಾಪುರ–ಪಿರಿಯಾಪಟ್ಟಣ ರಸ್ತೆಯ ಬದಿಯಲ್ಲಿ ಮಾಲ್ದಾರೆ ಸಮೀಪ ಆ ಚೀಲಗಳನ್ನು ಸುರಿಯಲಾಗಿದ್ದು, ಇದನ್ನು ಸ್ಥಳೀಯರು ಪ್ರಶ್ನಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ಪಂಚಾಯಿತಿ ಸಿಬ್ಬಂದಿ ಆ ಚೀಲಗಳನ್ನು ಅಲ್ಲಿಂದ ತೆರವುಗೊಳಿಸಿರುವುದಾಗಿ ತಿಳಿದುಬಂದಿದೆ.
ಪಂಚಾಯಿತಿ ವ್ಯಾಪ್ತಿಯಲ್ಲಿನ ಕಸ ತೆರವುಗೊಳಿಸಲು ಅನುದಾನ ಹಾಗೂ ಸಮಯದ ಕೊರತೆ ಇದೆ ಎಂದು ಹೇಳುತ್ತಿರುವ ಅಭಿವೃದ್ಧಿ ಅಧಿಕಾರಿಯವರು, ಕಾಂಟ್ರಾಕ್ಟರ್ ಸೂಚನೆ ಮೇರೆಗೆ ಕೆಲಸ ಮಾಡುತ್ತಿರುವುದು ದುಃಖಕರ ಎಂದು ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಂಞಣ್ಣ ಹಾಗೂ ಗ್ರಾಮಸ್ಥ ಪ್ರಮೋದ್ ಅಯ್ಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಪರಿಸರ ಸಂರಕ್ಷಣೆಗಾಗಿ ಜವಾಬ್ದಾರಿಯುತ ಕ್ರಮಗಳನ್ನು ಜಾರಿಗೆ ತರಬೇಕು ಹಾಗೂ ಗ್ರಾಮದಲ್ಲಿ ಸಮರ್ಪಕ ಕಸ ವಿಲೇವಾರಿ ವ್ಯವಸ್ಥೆಯನ್ನು ಖಚಿತಪಡಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…