Mysore
17
few clouds

Social Media

ಗುರುವಾರ, 12 ಫೆಬ್ರವರಿ 2026
Light
Dark

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಸೋಮವಾರಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದ ನಿವಾಸಿ ನಾರೂರು ಮನೆ ಮಧು ( ಅಶೋಕ .35) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ ; ಮೂರು ವರ್ಷದ ಪುತ್ರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪತ್ನಿ ಮತ್ತು ಪುತ್ರಿ ಬೆಂಗಳೂರಿಗೆ ತೆರಳಿದ್ದರು. ನೆನ್ನೆ ಬೆಳಿಗ್ಗೆ ಮೃತನ ತಾಯಿಯು ಕೂಡ ಬೆಂಗಳೂರಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಮದ್ಯ ಸೇವಿಸಿ ತಲೆಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Tags:
error: Content is protected !!