ಕೊಡಗು

ಕೊಡಗು| ಕಾಡಾನೆ ದಾಳಿ ವ್ಯಕ್ತಿ ಸಾವು

ಸಿದ್ದಾಪುರ: ಬಾಳೆಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.

ಪೊನ್ನಪ್ಪ ಸಂತೆಯ ನಿವಾಸಿ ಅಜಯ್‌ ಎಂಬಾತ ಮುಂಜಾನೆ ಏಳು ಗಂಟೆ ಸುಮಾರಿಗೆ ಸೈಕಲ್‌ ಸವಾರಿ ಮಾಡುವ ವೇಳೆ ಕಾಡಾನೆಯೊಂದು ಎದುರಾಗಿದ್ದು, ಅಜಯ್‌ ಮೇಲೆ ದಾಳಿ ಮಾಡಲು ಮುಂದಾಗಿದೆ.

ಅದೃಷ್ಟವಶಾತ್‌ ಆನೆ ದಾಳಿಯಿಂದ ಪಾರಾದ ಅಜಯ್‌ ಸೈಕಲ್‌ ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ. ಅದೇ ವೇಳೆ ಆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳನ್ನು ತಡೆಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

46 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

52 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

57 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

1 hour ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

1 hour ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago