Mysore
17
overcast clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಕುಶಾಲನಗರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೊಡಗು: ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ.

ದೇವಸ್ಥಾನದ ಮುಂಭಾಗ ಮೊಬೈಲ್‌ ಶಾಪ್‌ ನಡೆಸುತ್ತಿದ್ದ ವಿನೋದ್‌ ಎಂಬುವವರೇ ನೇಣಿಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ವಿನೋದ್‌ ಮೃತದೇಹ ಮಳಿಗೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ದೃಢಪಟ್ಟಿದೆ.

ವಿನೋದ್‌ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!