ಕೊಡಗು

ಕಾನೂನು ಬಾಹಿರ ಕೊಳವೆ ಬಾವಿ ಕೊರೆಯಲು ಯತ್ನಿಸಿದ ವ್ಯಕ್ತಿ: ಸ್ಥಳೀಯರಿಂದ ಹಿಗ್ಗಾಮುಗ್ಗಾ ತರಾಟೆ

ಸಿದ್ದಾಪುರ: ಗ್ರಾಮ ಪಂಚಾಯಿತಿಯ ಸಾರ್ವಜನಿಕ ನೀರು ಸರಬರಾಜು ಕೊಳವೆ ಬಾವಿ ಅನತಿ ದೂರದಲ್ಲಿ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕೊಳವೆ ಬಾವಿ ಕೊರೆಯುವುದನ್ನು ತಡೆಯುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.

ನೆಲ್ಲಿ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಬೀರನ ಕೈಮಾಡದಲ್ಲಿ ಪಂಚಾಯಿತಿ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆಯಲಾಗುತ್ತಿತ್ತು. ಸಾರ್ವಜನಿಕ ನೀರು ಸರಬರಾಜು ಕೊಳವೆ ಬಾವಿಯ ಅನತಿ ದೂರದಲ್ಲಿ ಇದನ್ನು ಕೊರೆಯಲಾಗುತ್ತಿತ್ತು. ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿಷಯ ತಿಳಿದ ಕೂಡಲೇ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಸ್ಥಳಕ್ಕಾಗಮಿಸಿ ಕೊಳವೆಬಾವಿ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಕೊಳವೆ ಬಾವಿ ತೆರೆಯಲು ಯಾವುದೇ ಅನುಮತಿ ಪತ್ರ ಇಲ್ಲದೆ ಇರುವುದರಿಂದ ಅದನ್ನು ಮುಚ್ಚಿಸಿ ಗಾಡಿಯನ್ನು ಹಿಂದಿರುಗಿಸಿ ಕಳುಹಿಸಿದರು.

ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಮಣಿ ಎಂಬುವವರು, 150ಕ್ಕೂ ಹೆಚ್ಚು ಕುಟುಂಬಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕೊಳವೆ ಬಾವಿ ಪಕ್ಕದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಕೊಳವೆ ಬಾವಿಯನ್ನು ಕೊರೆಸುತ್ತಿದ್ದರು. ಇದರಿಂದ ಗ್ರಾಮ ಪಂಚಾಯಿತಿಯ ಕೊಳವೆ ಬಾವಿಯಲ್ಲಿ ನೀರಿನ ಮಟ್ಟ ಕಡಿಮೆ ಆಗಲಿದೆ ಎಂಬ ಕಾರಣಕ್ಕಾಗಿ ಅದನ್ನು ತಡೆಯಲಾಗಿದೆ. ಈಗಾಗಲೆ ಬೇಸಿಗೆಯಲ್ಲಿ ಈ ಭಾಗದಲ್ಲಿ ನೀರಿನ ಅಭಾವ ಸೃಷ್ಟಿಯಾಗುತ್ತಿದ್ದು, ಈ ಕೊಳವೆ ಬಾವಿ ಬಂದರೆ ಮತ್ತಷ್ಟು ಸಮಸ್ಯೆಯಾಗುವ ದೃಷ್ಟಿಯಿಂದ ಸ್ಥಗಿತಗೊಳಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

6 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

12 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

13 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

18 hours ago