ಮಡಿಕೇರಿ: ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗ ಡಿಎಸ್‌ಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಸಿಪಿಐ ಅನೂಪ್ ಮಾದಪ್ಪ ಹಾಗೂ ಶೋಭಾ ಲಾಮಾಣಿ ಹಾಗೂ ಭಾಗಮಂಡಲ ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ. ಈ ಸಂದರ್ಭ, ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.
ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕೋಟಿ, ಎನ್.ಜೆ.ಶಿವರಾಮ ಹಾಗೂ ಎಸ್.ರವಿ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…