ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ ಅವಾಂತರಗಳು ಸೃಷ್ಠಿಯಾಗಿವೆ. ಪ್ರವಾಹದಿಂದ ರಾಜ್ಯದ ಹಲವು ರಾಜ್ಯ ಹೆದ್ದಾರಿಗಳು ಬಂದ್ ಆಗಿವೆ.
ನಾಪೋಕ್ಲು-ಚೆರಿಯಪರಂಬು, ನಾಪೋಕ್ಲು ಹೊದವಾಡ-ಬೊಳಿಬಾಣೆ ರಸ್ತೆ ಜಲಾವೃತಗೊಂಡಿದೆ. ಇದರಿಂದಾಗಿ ಅಕ್ಕಪಕ್ಕದ ಊರಿಗೆ ತೆರಳಲು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಲ್ಲಿ ರಸ್ತೆ ದಾಟಲು ಸಹ ವಾಹನ ಸವಾರರು ಸಹಾಸ ಮಾಡುವಂತ ಪರಿಸ್ಥಿತಿ ಇದೆ.
ಇನ್ನು ಜೋರು ಗಾಳಿ ಮಳೆಯಿಂದಾಗಿ ವಿರಾಜಪೇಟೆ ತಾಲೂಕಿನ ಹಾತೂರು ಗ್ರಾಮದ ಬಳಿ ಬೃಹತ್ ಮರ ಹೆದ್ದಾರಿ ಮೇಲೆಬಿದ್ದಿದ್ದು, ವಿರಾಜಪೇಟೆ-ಗೋಣಿಕೊಪ್ಪಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯ ನಡೆಯುತ್ತಿದೆ.
ಮತ್ತೊಂದು ಕಡೆ ಅಪಾರವಾದ ಮಳೆಯಿಂದ ಜಿಲ್ಲೆಯಲ್ಲಿರುವ ಜಲಪಾತಗಳು ಭೋರ್ಗರೆಯುತ್ತಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಾವುದೇ ಜಲಪಾತಗಳಿಗೆ ಇಳಿದು ಸ್ನಾನ ಮಾಡುವುದು ಹಾಗೂ ನದಿ-ತೊರೆಗಳು ಝರಿಗಳು ಸಾರ್ವಜನಿಕ ಕೆರೆಗಳಲ್ಲೂ ಸ್ನಾನ ಮಾಡುವುದನ್ನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…