ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದೆ.
ನಿನ್ನೆ ಸ್ನಾನ ಮಾಡುವ ವೇಳೆ ಕಂಜನ್ ಆನೆ ಮತ್ತು ಮಾರ್ತಾಂಡ ಆನೆ ನಡುವೆ ಕಾದಾಟ ನಡೆದಿತ್ತು. ಈ ವೇಳೆ ಮಾರ್ತಾಂಡ ಆನೆ ಕಾಲ ಕೆಳಗೆ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು.
ಕಂಜನ್ ಆನೆ ದಾಳಿಯಿಂದ ಮಾರ್ತಾಂಡ ಆನೆಯ ಹೊಟ್ಟೆ ಹಾಗೂ ಕಿವಿ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು.
ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಾರ್ತಾಂಡ ಆನೆ ಸಾವನ್ನಪ್ಪಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…