ಮಡಿಕೇರಿ: ಅಕ್ರಮವಾಗಿ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊನ್ನಂಪೇಟೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಗೋಣಿಕೊಪ್ಪದ ನಿವಾಸಿ ಗುರುದತ್(30) ಬಂಧಿತ ಆರೋಪಿ. ಜೂ.17ರಂದು ಪೊನ್ನಂಪೇಟೆ ನಗರದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 4 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ 1 ಕೆಜಿ 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಮಾರುತಿ ಬ್ರಿಜಾ ಮತ್ತು ಅಲ್ಟೋ ಕೆ10 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ವಿರಾಜಪೇಟೆ ಉಪವಿಭಾಗ ಡಿಎಸ್‌ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ವೃತ್ತ ಪ್ರಭಾರ ಸಿಪಿಐ ಶಿವರುದ್ರ ಬಿ.ಎಸ್., ಪೊನ್ನಂಪೇಟೆ ಪೊಲೀಸ್ ಠಾಣೆ ಪಿಎಸ್‌ಐ ನವೀನ್ ಜಿ, ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.





