ಮಡಿಕೇರಿ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದೆ.
ಇಂದು ಹಾಗೂ ನಾಳೆ ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ತೀರ, ಬೆಟ್ಟಗುಡ್ಡಗಳು, ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





