ಕೊಡಗು

ಸೇನಾ ವಾಹನ ಅಪಘಾತ ಪ್ರಕರಣ | ಕೊಡಗಿನ ಯೋಧ ದಿವಿನ್‌ ಹುತಾತ್ಮ

ಫಲಿಸದ ಪ್ರಾರ್ಥನೆ: ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ಕೊನೆಯುಸಿರು

ಮಡಿಕೇರಿ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗು ಮೂಲಕ ಯೋಧ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಸೋಮವಾರಪೇಟೆ ಸಮೀಪದ ಆಲೂರು-ಸಿದ್ದಾಪುರದ ಮಾಲಂಬಿ ಗ್ರಾಮದ ಯೋಧ ಪಿ.ಪಿ.ದಿವಿನ್(೨೮) ಮೃತ ಸೈನಿಕ. ಜಮ್ಮು ಕಾಶ್ಮೀರದ ಪೂಂಚ್ ಬಳಿ ಕಳೆದ ಬುಧವಾರ ಬೆಳಗಿನ ಜಾವ ಭಾರತೀಯ ಸೇನೆಯ ವಾಹನ ಪ್ರಪಾತಕ್ಕೆ ಉರುಳಿದ್ದು, ವಾಹನದಲ್ಲಿದ್ದ ೧೦ ಮಂದಿ ಯೋಧರ ಪೈಕಿ ಕರ್ನಾಟಕದ ಮೂವರು ಮತ್ತು ಮಹಾರಾಷ್ಟ್ರದ ಇಬ್ಬರು ಮೃತಪಟ್ಟಿದ್ದರು.
ವಾಹನ ಚಾಲಕ ಸೇರಿದಂತೆ ಐವರು ಯೋಧರ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿ ಜಮ್ಮುವಿನ ಉದಮಪುರ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು. ಅಮ್ಮನ ಕರೆಗೆ ದಿವಿನ್ ಸ್ಪಂದಿಸಿದ್ದರು ಎಂದು ಹೇಳಲಾಗಿತ್ತು. ಆದರೆ, ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರೆಳೆದಿದ್ದಾರೆ.

ಮಾಲಂಬಿ ಗ್ರಾಮದ ಪಳಂಗೋಟು ಪ್ರಕಾಶ್ ಮತ್ತು ಜಯ ದಂಪತಿಯ ಏಕೈಕ ಪುತ್ರ ದಿವಿನ್ ೧೦ ವರ್ಷಗಳ ಹಿಂದೆ ಭಾರತೀಯ ಭೂ ಸೇನೆಗೆ ಸೇರಿದ್ದರು. ದಿವಿನ್ ತಂದೆ ಪ್ರಕಾಶ್ ೨ ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಸಾಮ್ರಾಟ್ ರಿಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವಿನ್ ಬುಧವಾರ ಬೆಳಗಿನ ಜಾವ ಸೇನೆಯ ಮರಾಠ ರಿಜಿಮೆಂಟಿಗೆ ಸೇರಿದ ವಾಹನದಲ್ಲಿ ಇತರ ಸೈನಿಕರೊಂದಿಗೆ ಪೆಟ್ರೋಲಿಂಗ್‌ಗೆ ತೆರಳುತ್ತಿದ್ದಾಗ ವಾಹನ ಜಮ್ಮು ಕಾಶ್ಮೀರದ ಪೂಂಚ್ ಬಳಿ ಪ್ರಪಾತಕ್ಕೆ ಉರುಳಿತ್ತು.

ದಿವಿನ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಕೂಡ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ಶಿವಮೊಗ್ಗ ಮೂಲದ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯುತ್ತಿದ್ದರು. ಆದರೆ, ಈಗ ದಿವಿನ್ ನಿಧನಕ್ಕೆ ಶಾಸಕ ಮಂಥರ್ ಗೌಡ ಕೂಡ ಕಂಬನಿ ಮಿಡಿದಿದ್ದಾರೆ.

ಕೋಟ್:
ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದ ಕೊಡಗಿನ ಹೆಮ್ಮೆಯ ಯೋಧ ದಿವಿನ್‌ರವರ ನಿಧನ ಸುದ್ದಿ ಕಂಬನಿ ತರಿಸಿದೆ. ವೀರ ಯೋಧರೊಬ್ಬರನ್ನು ಈ ನಾಡು ಕಳೆದುಕೊಂಡಿದೆ. ಭಗವಂತನು ದಿವಿನ್‌ರವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಈ ಸಂದರ್ಭದಲ್ಲಿ ಪ್ರಾರ್ಥಿಸುತ್ತೇನೆ.
-ಡಾ.ಮಂಥರ್ ಗೌಡ, ಶಾಸಕ, ಮಡಿಕೇರಿ ವಿಧಾನಸಭಾ ಕ್ಷೇತ್ರ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

5 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

6 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

6 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

7 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

7 hours ago