ಕೊಡಗು

ಡ್ಯಾಂ ಪಕ್ಕದಲ್ಲೇ ಗಣಿಗಾರಿಕೆ: ಹಾರಂಗಿ ಡ್ಯಾಮ್‌ಗೂ ಕಾದಿದೆ ಕಂಟಕ?

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ.

ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಟ್ಟ ಕೊರೆದು ಕಲ್ಲು ಗಣಿಗಾರಿಕೆ ಮಾಡುವ ಮೂಲಕ ಪರೋಕ್ಷವಾಗಿ ಡ್ಯಾಂಗೆ ತೊಂದರೆ ಉಂಟಾಗುತ್ತಿದೆ. 1982 ರಲ್ಲಿ ಉದ್ಘಾಟನೆಯಾದ 162ಅಡಿ ಎತ್ತರದ (8.50 TMC ಸಾಮರ್ಥ್ಯ) 2775.8 ಉದ್ದವಿರುವ ಅಣೆಕಟ್ಟು ಇಂದು ಕೆಆರ್‌ಎಸ್‌ ಜಲಾಶಯದ ರೀತಿಯಲ್ಲಿ ತೊಂದರೆಗೆ ಸಿಲುಕಲಿದೆ.

ಸೋಮವಾರ ಪೇಟೆ ತಾಲ್ಲೂಕಿನ ಹೊಸಳ್ಳಿ ವ್ಯಾಪ್ತಿಯ ಮತ್ತು ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಮೂಲಕ ಪ್ರಕೃತಿ ಸಂಪತ್ತು ನಾಶವಾಗುತ್ತ ಬರತ್ತಿದ್ದು, ಇದರಿಂದ ಡ್ಯಾಂನ ಭದ್ರತೆಗೆ ಹೆಚ್ಚಿನ ಪೆಟ್ಟು ಬೀಳಲಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸರ್ಕಾರದ, ಜಿಲ್ಲಾಡಳಿತದ ಎಲ್ಲಾ NOC ಮತ್ತು ಅನುಮತಿ ಪಡೆದು ನಡೆಯುತ್ತಿರುವ ಗಣಿಗಾರಿಕೆಯಾಗಿದ್ದು, ಆರಣ್ಯವ್ಯಾಪ್ತಿಯಲ್ಲಿ ಬಫೋರ್ ಜೋನ್ ಬಿಡದೆ ನಡೆಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.

100 ಅಡಿಗೂ ಹೆಚ್ಚು ಆಳದಲ್ಲಿ ಬಂಡೆ ಸಿಡಿಸಿ, ಭೂಮಿ ಕೊರೆದು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಡ್ಯಾಂಗೆ ತೊಂದರೆಯಗಲಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಮುತ್ತಲಿನ 20 ಕಿಲೋಮೀಟರ್ ದೂರದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಕೋರ್ಟ್ ಆದೇಶ ಹೊರಡಿಸಿರುವ ರೀತಿಯಲ್ಲಿಯೇ ಹಾರಂಗಿ ಸುತಮುತ್ತಲಿನಲ್ಲಿ ಕಲ್ಲು ಗಣಿಗಾರಿಕೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನು ಈ ಡ್ಯಾಂ ಒಂದು ವೇಳೆ ಹಾನಿಗೆ ಒಳಗಾದಲ್ಲಿ ಅಕ್ಕಪಕ್ಕದ ಮೂರ್ನಾಲ್ಕು ಗ್ರಾಮಗಳು ಮುಳುಗಲಿದೆ. ಹಾಗೂ ಅಪಾರ ಪ್ರಮಾಣದ ಅಸ್ತಪಾಸ್ತಿಗೆ ಕೆಡುಕಾಗಲಿದೆ ಎಂದು ಸ್ಥಳೀಯರು ಬೇಸರ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

4 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago