Minister N.S. Boseraju Orders Report on Rain Damage in Kodagu
ಕೊಡಗು : ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಹಾರಂಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇತ್ತು. ಭಾರೀ ಮಳೆಯಿಂದ ರಸ್ತೆ, ಸೇತುವೆಗಳಿಗೆ ಹಾನಿಯಾಗಿದೆ. ಆದರೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರಿಂದ ಪ್ರಾಣಹಾನಿ ಆಗಿಲ್ಲ ಎಂದು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಮಳೆಯಾದರೆ ದಕ್ಷಿಣ ಕರ್ನಾಟಕ ಭಾಗಕ್ಕೆ ಹೆಚ್ಚು ಅನುಕೂಲವಾಗುತ್ತದೆ. ಆದರೆ, ಹೆಚ್ಚು ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಕೆಡಿಪಿ ಸಭೆಯಲ್ಲಿ ಎಷ್ಟು ಮನೆ, ರಸ್ತೆ, ಸೇತುವೆಗಳು ಹಾನಿಯಾಗಿವೆ ಎಂಬ ಮಾಹಿತಿ ಪಡೆದು ತಕ್ಷಣದ ಪರಿಹಾರ ಕಾರ್ಯಕ್ಕೆ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು. ಇದರ ಜತೆಗೆ ಶಾಶ್ವತ ಪರಿಹಾರಕ್ಕೆ ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಈ ಹಿಂದೆ ಮಳೆಯಿಂದ ರಸ್ತೆ, ಸೇತುವೆಗಳು ಹಾನಿಗೊಳಗಾಗಿದ್ದರೆ ಹಣ ಬಿಡುಗಡೆಗೆ ಕೆಲವು ಮಾನದಂಡಗಳಿದ್ದವು. ಆದರೆ, ಇದೀಗ ಎಷ್ಟು ಹಾನಿಯಾಗಿದೆಯೋ ಅಷ್ಟು ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ ಆಗಿರುವ ಹಾನಿ ಕುರಿತಂತೆ ವರದಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ವರದಿ ಸಲ್ಲಿಸಿದ ಕೂಡಲೇ ಕಂದಾಯ ಸಚಿರು, ಇಲಾಖೆ ಕಾರ್ಯದರ್ಶಿಗಳು ಹಾಗೂ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸೂಕ್ತ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಕೊಡಗಿನ ಕುಶಾಲನಗರ ಮತ್ತು ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಸಂಪರ್ಕದ ವೇದಿಕೆಯಾಗಿದ್ದ ರಾಮಸ್ವಾಮಿ ಕಣವೆ ತೂಗು ಸೇತುವೆ ಮುಚ್ಚಿರುವುದರಿಂದ ಆಗುತ್ತಿರುವ ಸಮಸ್ಯೆ ಗಮನದಲ್ಲಿದೆ. ಶೀಘ್ರದಲ್ಲೇ ಸಚಿವ ಎಂ. ವೆಂಕಟೇಶ್ ಅವರ ಜತೆ ಮಾತನಾಡಿ ಸೇತುವೆಯನ್ನು ಮತ್ತೆ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮಾರಾಜನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…