ಕೊಡಗು

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್‌ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.

ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ ಎಂ.ಅಮಿತ್ ಫೆ.11ರಂದು ಬೆಳಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ ಶಾಲೆಗೆಂದು ತೆರಳಿದ್ದಾನೆ. 11 ಗಂಟೆಯ ವೇಳೆಗೆ ಅಮಿತ್ ಶಾಲೆಯ ಮುಖ್ಯ ದ್ವಾರದ ಮೂಲಕ ರಸ್ತೆ ಕಡೆಗೆ ಬಂದಿದ್ದಾನೆ.

ಇದನ್ನು ಕಂಡ ಅಲ್ಲಿನ ಸೆಕ್ಯುರಿಟಿ ಸಿಬ್ಬಂದಿ, ಅಮಿತ್ ತಂದೆ ಆನಂದ್ ಅವರಿಗೆ ತಿಳಿಸಿದ್ದಾರೆ. ತಕ್ಷಣವೇ ಆನಂದ್ ರಸ್ತೆ ಕಡೆಗೆ ಬಂದಿದ್ದು, ಆದ್ರೆ ಅಮಿತ್ ಮಾತ್ರ ಕಂಡು ಬರಲಿಲ್ಲ. ಈ ಕುರಿತು ಆನಂದ್ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.

ಕೂಟುಪೊಳೆಯಲ್ಲಿ ಶೋಧ:

ಅಮಿತ್‌ ಚಪ್ಪಲಿ ಕೂಟುಪೊಳೆ ದಡದಲ್ಲಿ ಪತ್ತೆಯಾದ ಹಿನ್ನಲೆಯಲ್ಲಿ, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ನಿನ್ನೆಯಿಂದ ಕೂಟುಪೊಳೆಯಲ್ಲಿ ಅಮಿತ್‌ಗಾಗಿ ಶೋಧ ನಡೆಸಿದರು.

ಪೊಲೀಸರ ಕೋರಿಕೆಯ ಮೇರೆಗೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರ‍್ಯಾಫ್ಟ್ ಬೋಟ್ ಮೂಲಕ ಕೂಟುಹೊಳೆ ಮುಂಭಾಗದಿಂದ ಹಿನ್ನೀರಿನವರೆಗೂ ತೆರಳಿ ಶೋಧಿಸಿದರು. ಇದೀಗ ಮೃತ ದೇಹ ಕೂಟು ಪೊಳೆಯಲ್ಲಿ ಪತ್ತೆಯಾಗಿದೆ.

 

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

3 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

6 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 hours ago