ಕೊಡಗು

ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ

ಕುಶಾಲನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.

ಚೆಟ್ಟಳ್ಳಿ ನಿವಾಸಿ ಗಿರೀಶ್‌ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್‌ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಟೌನ್‌ ಠಾಣೆ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಸಿಬ್ಬಂದಿ ಜೊತೆ ಹುಡುಕಾಟ ನಡೆಸಿದ್ದರು. ಇಂದು ನಿಸರ್ಗಧಾಮ ಬಳಿಯ ಕಾವೇರಿ ನದಿಯಲ್ಲಿ ಗಿರೀಶ್‌ ಮೃತದೇಹ ಪತ್ತೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

41 mins ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

1 hour ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

2 hours ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

2 hours ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

3 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

3 hours ago