ಕೊಡಗು

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು ಉದ್ಘಾಟಿಸದೇ ವಾಪಸ್ ತೆರಳಿದ ಘಟನೆ ನಡೆದಿದೆ. ಶಾಸಕ ಮಂಥರ್ ಗೌಡ ನಡೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಕುಶಾಲನಗರದ ಹೃದಯ ಭಾಗದಲ್ಲಿರುವ ನಿಂಗೇಗೌಡ ಬಡಾವಣೆಯ ಎರಡನೇ ಹಂತದ ಕಾಮಗಾರಿ ಉದ್ಘಾಟನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಕಾಮಗಾರಿ ಗುಣಮಟ್ಟದಿಂದ ಕೂಡಿರದೆ ಇರುವುದನ್ನು ಗಮನಿಸಿದ ಶಾಸಕರು, ಸಾರ್ವಜನಿಕ ಹಣದ ದುರುಪಯೋಗಕ್ಕೆ ಸಾಕ್ಷಿಯಾಗುವ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಕಳಪೆ ಕಾಮಗಾರಿ ಎಂಬುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಉದ್ಘಾಟನೆಗೆಂದು ಬಂದಿದ್ದರೂ ಉದ್ಘಾಟನೆ ಮಾಡದೆ ಹಿಂತಿರುಗಿದ ಘಟನೆ ನಡೆಯಿತು.

ಈ ಕಾಮಗಾರಿಯ ಗುಣಮಟ್ಟವಾಗಿ ಸರಿ ಮಾಡಿಕೊಡದಿದ್ದರೆ ಯಾವುದೇ ಕಾರಣಕ್ಕೂ ಬಿಲ್ ಮಾಡಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಿಂಗೇಗೌಡ ನಿವಾಸಿಗಳು ಈ ಕಾಮಗಾರಿಯ ಗುಣಮಟ್ಟ ಚೆನ್ನಾಗಿದೆ ಎಂದು ಹೇಳಿದರೆ ಮಾತ್ರ ಬಿಲ್ ಪಾವತಿಯಾಗಲಿದೆ ಎಂದು ಶಾಸಕರು ಹೇಳಿದ್ದಾರೆ.

ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸಿನ ಅಧ್ಯಕ್ಷ ವಿಕ್ಟರ್ ಸೋನ್ಸ್, ಮಾಜಿ ಪುರಸಭೆ ಸದಸ್ಯ ವಿ.ಎಸ್. ಆನಂದ್ ಕುಮಾರ್ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

21 mins ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

26 mins ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

1 hour ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

2 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

3 hours ago

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…

3 hours ago