ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು ಉದ್ಘಾಟಿಸದೇ ವಾಪಸ್ ತೆರಳಿದ ಘಟನೆ ನಡೆದಿದೆ. ಶಾಸಕ ಮಂಥರ್ ಗೌಡ ನಡೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ಕುಶಾಲನಗರದ ಹೃದಯ ಭಾಗದಲ್ಲಿರುವ ನಿಂಗೇಗೌಡ ಬಡಾವಣೆಯ ಎರಡನೇ ಹಂತದ ಕಾಮಗಾರಿ ಉದ್ಘಾಟನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಕಾಮಗಾರಿ ಗುಣಮಟ್ಟದಿಂದ ಕೂಡಿರದೆ ಇರುವುದನ್ನು ಗಮನಿಸಿದ ಶಾಸಕರು, ಸಾರ್ವಜನಿಕ ಹಣದ ದುರುಪಯೋಗಕ್ಕೆ ಸಾಕ್ಷಿಯಾಗುವ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಕಳಪೆ ಕಾಮಗಾರಿ ಎಂಬುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಉದ್ಘಾಟನೆಗೆಂದು ಬಂದಿದ್ದರೂ ಉದ್ಘಾಟನೆ ಮಾಡದೆ ಹಿಂತಿರುಗಿದ ಘಟನೆ ನಡೆಯಿತು.
ಈ ಕಾಮಗಾರಿಯ ಗುಣಮಟ್ಟವಾಗಿ ಸರಿ ಮಾಡಿಕೊಡದಿದ್ದರೆ ಯಾವುದೇ ಕಾರಣಕ್ಕೂ ಬಿಲ್ ಮಾಡಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಿಂಗೇಗೌಡ ನಿವಾಸಿಗಳು ಈ ಕಾಮಗಾರಿಯ ಗುಣಮಟ್ಟ ಚೆನ್ನಾಗಿದೆ ಎಂದು ಹೇಳಿದರೆ ಮಾತ್ರ ಬಿಲ್ ಪಾವತಿಯಾಗಲಿದೆ ಎಂದು ಶಾಸಕರು ಹೇಳಿದ್ದಾರೆ.
ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸಿನ ಅಧ್ಯಕ್ಷ ವಿಕ್ಟರ್ ಸೋನ್ಸ್, ಮಾಜಿ ಪುರಸಭೆ ಸದಸ್ಯ ವಿ.ಎಸ್. ಆನಂದ್ ಕುಮಾರ್ ಇತರರು ಉಪಸ್ಥಿತರಿದ್ದರು.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…