ಕೊಡಗು

ಕುಶಾಲನಗರ: ಮಳೆ ಹಾನಿ ಪ್ರದೇಶಕ್ಕೆ ಶಾಸಕ ಮಂತರ್ ಗೌಡ ಭೇಟಿ

ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ವಿದ್ಯುತ್ ಕಂಬ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಡಾ.ಮಂತರ್ ಗೌಡ ರವರು ಭೇಟಿ ನೀಡಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದರು.

ಕುಶಾಲನಗರ ತಾಲ್ಲೂಕಿನ 7ನೇ ಹೊಸಕೋಟೆ ಪಂಚಾಯತ್ ವ್ಯಾಪ್ತಿಗೆ ಸೇರಿದ ಉರುಗುಪ್ಪ 3ನೇ ವಾರ್ಡ್‌ನ ಮೊಹಮದ್ ಅವರ ಮನೆಯ ಮೇಲೆ ಮರ ಬಿದ್ದು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.

ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತೂರ್‌ನ ಅತ್ತಿ ಮಂಗಲ ಜಂಕ್ಷನ್‌ನಲ್ಲಿ ರಸ್ತೆಗೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡುವಂತೆ ಹಾಗೂ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಕುಶಾಲನಗರ ತಹಶೀಲ್ದಾರ್, ಪಂಚಾಯಿತಿ ಪಿಡಿಒ, ಅರಣ್ಯ ಅಧಿಕಾರಿಗಳು, ಸ್ಥಳೀಯರು, ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

2 hours ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

2 hours ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

2 hours ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

3 hours ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

4 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

4 hours ago