MLA Mantar Gowda
ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ವಿದ್ಯುತ್ ಕಂಬ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಡಾ.ಮಂತರ್ ಗೌಡ ರವರು ಭೇಟಿ ನೀಡಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದರು.
ಕುಶಾಲನಗರ ತಾಲ್ಲೂಕಿನ 7ನೇ ಹೊಸಕೋಟೆ ಪಂಚಾಯತ್ ವ್ಯಾಪ್ತಿಗೆ ಸೇರಿದ ಉರುಗುಪ್ಪ 3ನೇ ವಾರ್ಡ್‌ನ ಮೊಹಮದ್ ಅವರ ಮನೆಯ ಮೇಲೆ ಮರ ಬಿದ್ದು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತೂರ್‌ನ ಅತ್ತಿ ಮಂಗಲ ಜಂಕ್ಷನ್‌ನಲ್ಲಿ ರಸ್ತೆಗೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡುವಂತೆ ಹಾಗೂ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕುಶಾಲನಗರ ತಹಶೀಲ್ದಾರ್, ಪಂಚಾಯಿತಿ ಪಿಡಿಒ, ಅರಣ್ಯ ಅಧಿಕಾರಿಗಳು, ಸ್ಥಳೀಯರು, ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…