ಸಿದ್ದಾಪುರ : ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆ ಕಂಡು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದ ನಿಲ್ಲುವುದಿಕೇರಿ ಗ್ರಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಟ್ಟದಕಾಡು ನಲ್ವತ್‌ಎಕ್ರೆ, ಕುಂಬಾರ ಗುಂಡಿ ನದಿ ದಡ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ನದಿದಡ ವ್ಯಾಪ್ತಿಯ ರಸ್ತೆಗಳಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರೊಂದಿಗೆ ಗ್ರಾಮದಲ್ಲಿ ಹಲವು ಸಮಸ್ಯೆಗಳಿದ್ದು, ಕೂಡಲೇ ಬಗೆಹರಿಸಬೇಕೆಂದು ಗ್ರಾಮಸ್ಥರು ಶಾಸಕರನ್ನು ಒತ್ತಾಯಿಸಿದರು.
ಶಾಸಕ ಮಂಥರ್ ಗೌಡ ಮಾತನಾಡಿ, ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಲಾಗುತ್ತಿದ್ದು, ತಾತ್ಕಾಲಿಕ ಗುಂಡಿ ಮುಚ್ಚುವ ಕೆಲಸ ಮಾಡಲು ಸೂಚಿಸಲಾಗಿದೆ. ಮಳೆಗಾಲದ ನಂತರ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಲಾಗುವುದು ಎಂದು ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ಸಾಬು ವರ್ಗಿಸ್ ಮಾತನಾಡಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ, ಸದಸ್ಯರಾದ ಎ.ಕೆ.ಹಕೀಂ, ಅಶೋಕ್, ಹನೀಫ್, ಮುಸ್ತಾಫಾ, ಶಫಿಯ, ಕೆ.ಎಂ.ಬಶೀರ್, ಕೆ.ಎಂ.ಭಾವ, ಕಾಂಗ್ರೆಸ್ ಮುಖಂಡರಾದ ಸಂಶು, ಅಬ್ದುಲ್ಲ, ಸಿ.ಎಂ.ಹಂಸ ಹಾಜರಿದ್ದರು.





