ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು.
ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ ಪಕ್ಷದ ನಿಷ್ಠೆಯ ಹಾಗೂ ಪ್ರಾಮಾಣಿಕ ಕಾರ್ಯಕರ್ತನನ್ನು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರಿರುವುದು ಅತ್ಯಂತ ಖಂಡನೀಯ.
ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾಗಿರುವ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಅವರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಲೇಬೇಕು. ವಿನಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಸರ್ಕಾರದ ವಿರುದ್ಧ ಟೀಕೆ ಮಾಡಿದರೆ ವಾಟ್ಸ್ಯಾಪ್ ಗ್ರೂಪ್‌ಗಳ ಅಡ್ಮಿನ್‌ಗಳ ಮೇಲೆ ಎಫ್ಐಆರ್ ದಾಖಲಿಸುವ, ಬಂಧಿಸುವ ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್ ಸರ್ಕಾರ ನಾಂದಿ ಹಾಡಿದೆ. ರಾಜ್ಯದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ. ವಿನಯ್ ಸೋಮಯ್ಯ ಅವರ ಪ್ರಕರಣದಲ್ಲಿ ಶಾಸಕರ ಹೆಸರನ್ನು ಸೇರಿಸಲೇ ಬೇಕು, ಇಲ್ಲದಿದ್ದರೆ ಮುಂದಿನ ಅನಾಹುತಗಳಿಗೆ ಪೊಲೀಸ್ ಇಲಾಖೆ ಮತ್ತು ಸರ್ಕಾರವೇ ಹೊಣೆಯಾಗಲಿದೆ ಎಂದು ಹೇಳಿದರು.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…