ಕೊಡಗು

ವಿನಯ್ ಪ್ರಕರಣದಲ್ಲಿ ಶಾಸಕರ ಹೆಸರು ಸೇರಿಸಲೆಬೇಕು: ಬಿ.ವೈ.ವಿಜಯೇಂದ್ರ ಒತ್ತಾಯ

ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು.

ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ ಪಕ್ಷದ ನಿಷ್ಠೆಯ ಹಾಗೂ ಪ್ರಾಮಾಣಿಕ ಕಾರ್ಯಕರ್ತನನ್ನು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರಿರುವುದು ಅತ್ಯಂತ ಖಂಡನೀಯ.

ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾಗಿರುವ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಅವರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಲೇಬೇಕು. ವಿನಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

ಸರ್ಕಾರದ ವಿರುದ್ಧ ಟೀಕೆ ಮಾಡಿದರೆ ವಾಟ್ಸ್ಯಾಪ್ ಗ್ರೂಪ್‌ಗಳ ಅಡ್ಮಿನ್‌ಗಳ ಮೇಲೆ ಎಫ್ಐಆರ್ ದಾಖಲಿಸುವ, ಬಂಧಿಸುವ ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್ ಸರ್ಕಾರ ನಾಂದಿ ಹಾಡಿದೆ. ರಾಜ್ಯದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ. ವಿನಯ್ ಸೋಮಯ್ಯ ಅವರ ಪ್ರಕರಣದಲ್ಲಿ ಶಾಸಕರ ಹೆಸರನ್ನು ಸೇರಿಸಲೇ ಬೇಕು, ಇಲ್ಲದಿದ್ದರೆ ಮುಂದಿನ ಅನಾಹುತಗಳಿಗೆ ಪೊಲೀಸ್ ಇಲಾಖೆ ಮತ್ತು ಸರ್ಕಾರವೇ ಹೊಣೆಯಾಗಲಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

32 mins ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

1 hour ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

2 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

3 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

8 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

8 hours ago