ಮಡಿಕೇರಿ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಮಡಿಕೇರಿ ಜಿಲ್ಲಾಡಳಿತ ಕಟ್ಟಡದಲ್ಲಿ ನೂತನ ಸಂಸದ ಕಚೇರಿಯನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ನಮಗೆ ನೇರವಾಗಿ ತಲುಪಿಸಬಹುದು.. ಇಲ್ಲಿ ಇನ್ನು ಮಂದಿನ ದಿನಗಳಲ್ಲಿ ನಮ್ಮ ಸಲಹೆಗಾರರು ವಾರದ ಎಲ್ಲಾ ದಿವಸಗಳು ನಮ್ಮ ಕಚೇರಿಯಲ್ಲಿ ಇರುತ್ತಾರೆ. ನಾನು ಸಹ ವಾರದಲ್ಲಿ ಒಂದು ದಿನ ಸಾರ್ವಜನಿಕರಿಗೆ ಸಿಗುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ವಿಕಸಿತ ಭಾರತದಲ್ಲಿ ಕೊಡಗಿನ ಗ್ರಾಮ ಮಟ್ಟದ ಸೇವೆಗಳಿಗೆ ನಾನು ಸದಾ ಬದ್ಧನಾಗಿ ನಿಮ್ಮ ಸೇವೆ ಮಾಡಲು ಸಿದ್ದನಿದ್ದೇನೆ. ಕೊಡಗಿನ ಕುಶಾಲನಗರದಿಂದ ಶ್ರೀರಂಗಪಟ್ಟಣದವರೆಗಿನ ಕೆಂದ್ರ ಹೆದ್ದಾರಿಯ ಕಾಮಗಾರಿ ಅತಿ ಶೀಘ್ರದಲ್ಲಿ ಚಾಲನೆ ನೀಡಿ ಕೊಡಗಿನ ಜನತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹೇಳಿದರು.
ಮಾಜಿ ವಿಧಾನಸಭಾಧ್ಯಕ್ಷರಾದ ಕೆ ಜಿ ಬೋಪಯ್ಯ, ಮಾಜಿ ಸಚಿವರಾದ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರವಿ ಕಾಳಪ್ಪ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿ ಕುಶಾಲಪ್ಪ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಹೇಶ್ ಜೈನಿ, ನಾಗೇಶ್ ಕುಂದಾಲ್ಪಡಿ ಮತ್ತಿತರ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…