ಕೊಡಗು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಡಿಕೇರಿಯಲ್ಲಿ ಇಂದು(ಜನವರಿ.11) ನಮ್ಮ ಸಾರ್ವಜನಿಕರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅವರ ಅಹವಾಲುಗಳನ್ನು ಸ್ವೀಕರಿಸಲಾಯಿತು ಎಂದು ತಿಳಿಸಿದ್ದಾರೆ.
ಅಹವಾಲುಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದೆ. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಯಿತು ಎಂದು ಹೇಳಿದ್ದಾರೆ.
ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೊ ಬಿಡುಗಡೆ ಕಾರ್ಯಕ್ರಮ
ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಇಂದು(ಜನವರಿ.11) ಹಮ್ಮಿಕೊಂಡಿದ್ದ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೊ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿˌ ಪಂದ್ಯಾವಳಿಯ ಲೋಗೊವನ್ನು ಅನಾವರಣಗೊಳಿಸಿˌ ನಂತರ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯˌ ಮುದ್ದಂಡ ಕುಟುಂಬದ ಪಟ್ಟೇದಾರ ಮುದ್ದಂಡ ಡಾಲಿ ತಿಮ್ಮಯ್ಯˌ ಹಾಗೂ ಹಾಕಿ ಅಕಾಡೆಮಿಯ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.