ಕೊಡಗು

ಕೊಡಗು| ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಯದುವೀರ್‌

ಕೊಡಗು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಡಿಕೇರಿಯಲ್ಲಿ ಇಂದು(ಜನವರಿ.11) ನಮ್ಮ ಸಾರ್ವಜನಿಕರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅವರ ಅಹವಾಲುಗಳನ್ನು ಸ್ವೀಕರಿಸಲಾಯಿತು ಎಂದು ತಿಳಿಸಿದ್ದಾರೆ.

ಅಹವಾಲುಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದೆ. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಯಿತು ಎಂದು ಹೇಳಿದ್ದಾರೆ.

ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೊ ಬಿಡುಗಡೆ ಕಾರ್ಯಕ್ರಮ

ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಇಂದು(ಜನವರಿ.11) ಹಮ್ಮಿಕೊಂಡಿದ್ದ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೊ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿˌ ಪಂದ್ಯಾವಳಿಯ ಲೋಗೊವನ್ನು ಅನಾವರಣಗೊಳಿಸಿˌ ನಂತರ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್‌ ಗೌಡ, ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯˌ ಮುದ್ದಂಡ ಕುಟುಂಬದ ಪಟ್ಟೇದಾರ ಮುದ್ದಂಡ ಡಾಲಿ ತಿಮ್ಮಯ್ಯˌ ಹಾಗೂ ಹಾಕಿ ಅಕಾಡೆಮಿಯ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

1 min ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

1 hour ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

2 hours ago