ಕಾಫಿ ಬೆಳಗಾರರ ಸಹಕಾರ ಸಂಘದ ಸಮಸ್ಯೆ ಬಗೆಹರಿಸಿ
ಹೊಸದಿಲ್ಲಿ : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿರುವ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಹೊಸದಿಲ್ಲಿಯಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
೧೯೫೬ರಲ್ಲಿ ಸ್ಥಾಪನೆಯಾದ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ೧೦ರಿಂದ ೧೨ ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರಿಗೆ ಬೆಂಬಲವಾಗಿ ನಿಂತಿದೆ. ಸುಮಾರು ೪೦,೦೦೦ ಕುಟುಂಬಗಳಿಗೆ ಬೆನ್ನೆಲುಬಾಗಿದೆ. ಸಾವಿರಾರು ಎಸ್ಟೇಟ್ ಕಾರ್ಮಿಕರಿಗೆ ಉದ್ಯೋಗ ನೀಡಿದೆ. ಇಂಥ ಸಂಘ ಮಾರುಕಟ್ಟೆ ಏರಿಳಿತಗಳು ಹಾಗೂ ಬಂಡವಾಳದ ಕೊರತೆಯಿಂದಾಗಿ, ೧೯೯೫-೯೬ ರಲ್ಲಿ ೬.೮೫ ಕೋಟಿ ನಷ್ಟವನ್ನು ಅನುಭವಿಸಿತು ಎಂದು ತಿಳಿಸಲಾಗಿದೆ ಎಂದು ವಿವರಿಸಿದ್ದಾರೆ.
ಭಾರಿ ಬಡ್ಡಿ ಹೇರಿಕೆ:
ಕಾಫಿ ಮಂಡಳಿಯು ೧೨.೯.೨೦೧೧ರಂದು ನೀಡಿದ ತೀರ್ಪಿನ ಪ್ರಕಾರ, ಸೊಸೈಟಿಯು ೧,೫೫,೨೮,೦೩೪ ಬಡ್ಡಿ ಪಾವತಿಸಲು ಸೂಚಿಸಿತ್ತು. ನಂತರ ಕಾಫಿ ಮಂಡಳಿಯು ೨೦.೦೯.೨೦೧೫ರಂದು ಪತ್ರ ಬರೆದು, ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವ ಅವಕಾಶ ಒದಗಿಸಿತ್ತು. ಅದರನ್ವಯ ಸೊಸೈಟಿಯು ೨೨.೧೨.೨೦೧೫ರಂದು ೧,೫೫,೨೮,೦೯೦ ರೂ. ಪಾವತಿಸಿತು. ಆದರೆ ೨೦೧೭ರಲ್ಲಿ ಕಾಫಿ ಮಂಡಳಿಯು ೫,೮೩,೮೫,೧೫೫ ರೂ. ಬಡ್ಡಿ ವಿಽಸಿ ಮತ್ತು ಹೆಚ್ಚಿನ ಮೊತ್ತದ ವೆಚ್ಚವನ್ನು ಪಾವತಿಸಲು ಪತ್ರ ಬರೆಯಿತು ಎಂದು ಕೇಂದ್ರ ಸಚಿವರಿಗೆ ವಸ್ತುಸ್ಥಿತಿ ತಿಳಿಸಿದರು.
ಸೊಸೈಟಿಯು ಈಗ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ೧೩.೧೩ ಕೋಟಿ ರೂ. ನಷ್ಟ ಅನುಭವಿಸಿದೆ. ಈ ಸಂದರ್ಭದಲ್ಲಿ ಬಡ್ಡಿ ಪಾವತಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಬಡ್ಡಿ ಪಾವತಿಸಿದರೆ, ಸೊಸೈಟಿಯು ಆರ್ಥಿಕವಾಗಿ ದಿವಾಳಿಯಾಗಲಿದೆ. ಇದರಿಂದ ಸುಮಾರು ಒಂದು ಲಕ್ಷ ಜನರು ತೀವ್ರ ಪರಿಣಾಮ ಎದುರಿಸಬೇಕಾದೀತು ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ನಿಟ್ಟಿನಲ್ಲಿ ವಾಣಿಜ್ಯ ಸಚಿವರು ಕೂಡಲೇ ಮಧ್ಯಪ್ರವೇಶಿಸಿ, ಸೊಸೈಟಿಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು. ಈ ಸಂಬಂಧ ಹಣಕಾಸು ಸಚಿವಾಲಯದ ಜೊತೆಗೆ ಸಮನ್ವಯ ಸಾಽಸಿ ಸಂಸ್ಥೆಗೆ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು ಎಂದು ಮನವಿ ಮಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…