ಮಡಿಕೇರಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ.
ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ RSS ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇವು ಎಲ್ಲಾ ಬೇಕಾಗಿಲ್ಲದ ವಿಚಾರವಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಪ್ರಣಾಳಿಕೆ ಇರಬಹುದು, ಆಶ್ವಾಸನೆ ಇರಬಹುದು. ಇದೆಲ್ಲ ಆಧಾರದ ಮೇಲೆ ಗೆಲುವು ಸಾಧಿಸಬೇಕು. ಈ ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸಮಾಜವನ್ನು ವಿಭಜನೆ ಮಾಡುವುದು ರಾಜಕೀಯ ಲಾಭಕ್ಕಾಗಿ ಎಂದು ಕಿಡಿಕಾರಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…