ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ (ಜು.19) ಭೇಟಿ ನೀಡಿ ವೀಕ್ಷಿಸಿದರು.
ಜಿಲ್ಲೆಯ ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿದ ಸಂಸದರು ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಾಯಿ ಬಡಾವಣೆಯ ನಿವಾಸಿಗಳು ಪ್ರವಾಹದಿಂದ ಉಂಟಾಗುವ ತೊಂದರೆ ಬಗ್ಗೆ ಸಂಸದರ ಗಮನ ಸೆಳೆದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು. ಸಂಸದರ ಜತೆಯಲ್ಲಿ ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಇತರರು ಇದ್ದರು.