ಕೊಡಗು

ಕೊಡಗು: ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ (ಜು.19) ಭೇಟಿ ನೀಡಿ ವೀಕ್ಷಿಸಿದರು.

ಜಿಲ್ಲೆಯ ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿದ ಸಂಸದರು ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಾಯಿ ಬಡಾವಣೆಯ ನಿವಾಸಿಗಳು ಪ್ರವಾಹದಿಂದ ಉಂಟಾಗುವ ತೊಂದರೆ ಬಗ್ಗೆ ಸಂಸದರ ಗಮನ ಸೆಳೆದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು. ಸಂಸದರ ಜತೆಯಲ್ಲಿ ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಇತರರು ಇದ್ದರು.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago