ಕೊಡಗು

ಬಿಜೆಪಿಯ ಅಹೋರಾತ್ರಿ ಧರಣಿಗೆ ಕೈ ಜೋಡಿಸಿದ ಸಂಸದ ಯದುವೀರ್‌

ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ಪಾಲ್ಗೊಂಡರು.

ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಶುಕ್ರವಾರ ಸಂಸದ ಯದುವೀರ್‌, ಮಾಜಿ ಸಚಿವರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಮುಖಂಡರು ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಯದುವೀರ್‌, ನನ್ನ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಯ ಜನತೆಯ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಸಿಗುವವರೆಗೆ ಹೋರಾಟ ನಡೆಸುತ್ತೇವೆ ಎಂದರು.

ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ. ಈಗ ಗ್ಯಾರಂಟಿ ಯೋಜನೆಗಳಿಗೆ ಇತರೆ ಅನುದಾನಗಳನ್ನು ಬಳಸಿ, ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿದೆ. ಅತ್ಯಂತ ಬೇಜವಾಬ್ದಾರಿಯುತ ಸರ್ಕಾರ ಇದಾಗಿದೆ ಎಂದು ಸಂಸದ ಯದುವೀರ್‌ ಕಿಡಿಕಾರಿದರು.

ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೇ ಕಾಲ ಕಳೆಯುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಕೊಡಗು ವಿಶ್ವವಿದ್ಯಾಲಯ ಸೇರಿದಂತೆ ನೂತನ ವಿವಿಗಳನ್ನು ಮುಚ್ಚಬಾರದು ಎಂದು ಈಗಾಗಲೇ ಪ್ರತಿಭಟನೆ ನಡೆಸಲಾಗಿದ್ದು, ಸರ್ಕಾರದ ಗಮನಕ್ಕೂ ಇದನ್ನು ತರಲಾಗಿದೆ. ಕೊಡಗು ವಿವಿ ಉಳಿಸಬೇಕು ಎಂಬುದು ನಮ್ಮ ಒಕ್ಕೊರಲ ಕೂಗು ಆಗಿದೆ ಎಂದು ತಿಳಿಸಿದರು.

ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

ಬಿಜೆಪಿ ಹಿರಿಯ ಮುಖಂಡರು, ಸ್ಥಳೀಯ ನಾಯಕರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

1 hour ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago