ಕೊಡಗು

ಮುಡಾ, ವಾಲ್ಮೀಕಿ ನಿಗಮ ಹಗರಣವನ್ನು ಸಿಬಿಐಗೆ ನೀಡಿದರೆ ಸತ್ಯಾಂಶ ಹೊರಬರಲಿದೆ: ಸಂಸದ ಯದುವೀರ್‌ ಒಡೆಯರ್‌

ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ಎರಡರಲ್ಲೂ ಹಗರಣ ಆಗಿದೆ ಅಂತಾ ನಾವು ಎಲ್ಲಾ ಕಡೆ ಹೇಳಿದ್ದೇವೆ. ಇದೇ ವಿಚಾರವಾಗಿ ನಾಳೆ ಮೈಸೂರಿನಲ್ಲಿ ನಮ್ಮ ಪಕ್ಷದಿಂದಲೂ ಪ್ರತಿಭಟನೆ ಇದೆ. ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ಜೊತೆಗೆ ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಇದನ್ನು ಸಿಬಿಐಗೆ ಕೊಡಬೇಕು. ಎರಡೂ ಪ್ರಕರಣಗಳ ಸತ್ಯಾಂಶ ಹೊರಬರಬೇಕು ಅಂದರೆ ಕೇಸ್‌ನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

36 mins ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮಂಡ್ಯ: ಇಂದಿನಿಂದ ( ಡಿಸೆಂಬರ್‌ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

2 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

10 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

11 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

11 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

11 hours ago