ಕೊಡಗು

ವಿರಾಜಪೇಟೆ | ಮಳೆಯಿಂದ ಪುರಸಭೆ ಕಚೇರಿ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ

ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ.

ಕಚೇರಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಕಚೇರಿಯ ಮೇಲ್ಚಾವಣಿಯ ಸ್ವಲ್ಪ ಭಾಗ ಕುಸಿದು ಹೆಂಚುಗಳು ಕೆಳಗೆ ಬಿದ್ದಿವೆ. ಮಳೆಯಲ್ಲಿ ಹೆಂಚಿನ ತೊಕ ಹೆಚ್ಚಾದ ಕಾರಣ ಈ ರೀತಿ ಆಗಿದೆ ಎಂದು ಹೇಳಲಾಗಿದೆ.

ಕೆಲವು ಪುರಸಭಾ ಸದಸ್ಯರು, ಸದ್ಯಕ್ಕೆ ಸುರಕ್ಷತಾ ದೃಷ್ಟಿಯಿಂದ ಪ್ರವಾಸಿ ಮಂದಿರದ ಸಮೀಪವಿರುವ ಲೋಕೊಪಯೋಗಿ ಇಲಾಖೆಯ ನೂತನ ಕಟ್ಟಡ ಖಾಲಿ ಇದ್ದು, ಅಲ್ಲಿಗೆ ಈ ಕಚೇರಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago