Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ.

ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, ಈ ಬಾರಿ ಮೊದಲ ಬಾರಿಗೆ ಇಸಿಜಿ ಪರೀಕ್ಷೆಯನ್ನು ಮಾಡಲಾಗಿದೆ.

20ಕ್ಕೂ ಅಧಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಿದ್ದು, ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ರವಾನಿಸಲಾಗಿದೆ. ಜೊತೆಗೆ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್‌ ಮೂಲಕ ಗರ್ಭಧಾರಣೆ ಪರೀಕ್ಷೆಯನ್ನು ಸಹ ನಡೆಸಲಾಗಿದೆ.

ಇನ್ನು ವಿಶೇಷವಾಗಿ ಈ ಸಲ ಮೊದಲ ಬಾರಿಗೆ ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ಇಸಿಜಿ ಪರೀಕ್ಷೆ ನಡೆಸಲಾಗಿದೆ.

ಈ ವರ್ಷ ವಿಜಯದಶಮಿ ಹಬ್ಬ 20 ದಿನ ತಡವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಯೂ ವಿಳಂಬವಾಗಿ ಆರಂಭವಾಗಿದೆ.

Tags:
error: Content is protected !!