ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ.
ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, ಈ ಬಾರಿ ಮೊದಲ ಬಾರಿಗೆ ಇಸಿಜಿ ಪರೀಕ್ಷೆಯನ್ನು ಮಾಡಲಾಗಿದೆ.
20ಕ್ಕೂ ಅಧಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಿದ್ದು, ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ರವಾನಿಸಲಾಗಿದೆ. ಜೊತೆಗೆ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಮೂಲಕ ಗರ್ಭಧಾರಣೆ ಪರೀಕ್ಷೆಯನ್ನು ಸಹ ನಡೆಸಲಾಗಿದೆ.
ಇನ್ನು ವಿಶೇಷವಾಗಿ ಈ ಸಲ ಮೊದಲ ಬಾರಿಗೆ ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ಇಸಿಜಿ ಪರೀಕ್ಷೆ ನಡೆಸಲಾಗಿದೆ.
ಈ ವರ್ಷ ವಿಜಯದಶಮಿ ಹಬ್ಬ 20 ದಿನ ತಡವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಯೂ ವಿಳಂಬವಾಗಿ ಆರಂಭವಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…