Mysore
23
clear sky

Social Media

ಬುಧವಾರ, 25 ಮಾರ್ಚ್ 2026
Light
Dark

ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್

ಮೈಸೂರು : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಯೋಜನೆ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್‌ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದರು ಎಂದು ವಿವರಿಸಿದ್ದಾರೆ.

ಈ ಸಂಬಂಧ ಕೊಡಗು ಜಿಲ್ಲೆಯವರ ನೀರಿನ ಸಮಸ್ಯೆ ನೀಗಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಅತಿ ಶೀಘ್ರದಲ್ಲೇ ಇದಕ್ಕೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಮಾತನಾಡಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಅತಿ ಶೀಘ್ರದಲ್ಲೇ ಪರಿಹಾರವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!