ಮೈಸೂರು : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಯೋಜನೆ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್‌ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದರು ಎಂದು ವಿವರಿಸಿದ್ದಾರೆ.
ಈ ಸಂಬಂಧ ಕೊಡಗು ಜಿಲ್ಲೆಯವರ ನೀರಿನ ಸಮಸ್ಯೆ ನೀಗಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಅತಿ ಶೀಘ್ರದಲ್ಲೇ ಇದಕ್ಕೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಮಾತನಾಡಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಅತಿ ಶೀಘ್ರದಲ್ಲೇ ಪರಿಹಾರವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…