ಮಡಿಕೇರಿ: ಕೊಡವ ಲ್ಯಾಂಡ್ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊಡವರು ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೊಂದಿದ್ದಾರೆ. ಈ ಸಮುದಾಯವನ್ನು ಸಂರಕ್ಷಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಹಲವಾರು ಹಕ್ಕುಗಳನ್ನು ಭಾರತೀಯ ಸಂವಿಧಾನವು ನಮಗೆ ನೀಡಿದೆ ಎಂದರು.
ಕೊಡವ ಸಮುದಾಯವನ್ನು ರಕ್ಷಿಸಲು ಎಸ್‌ಟಿ ಟ್ಯಾಗ್ ನೀಡಬೇಕು ಎಂದು ಆಗ್ರಹಿಸಿದ ನಾಚಪ್ಪ, ಸಿಎನ್‌ಸಿ ಮೂರು ದಶಕಗಳಿಂದ ಇದಕ್ಕಾಗಿ ಹೋರಾಟ ಮಾಡುತ್ತಿದೆ. ಸಂವಿಧಾನದ ಮೂಲಕ ಹಕ್ಕುಗಳನ್ನು ಪಡೆಯಲು ಶ್ರಮ ವಹಿಸುತ್ತಿದೆ ಎಂದರು.
ಈ ಹಿನ್ನೆಲೆಯಲ್ಲಿ ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ, ಕೊಡಗಿಗೆ ಪ್ರತ್ಯೇಕ ಲೋಕಸಭಾ ಸ್ಥಾನ, ಶಸ್ತ್ರಾಸ್ತ್ರ ಕಾಯ್ದೆಯಿಂದ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.