ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಣೆ ಮಾಡಿ ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದು ಆರೈಕೆ ಮಾಡುತ್ತಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…