Mysore
13
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಕೊಡಗಿನಲ್ಲಿ ರಾತ್ರಿ ಇಡಿ ಸುರಿದ ಮಳೆ…

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧುವಾರ ರಾತ್ರಿ ಇಡೀ ನಿರಂತರವಾಗಿ ಧಾರಕಾರ ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆಯೂ ಬಿರುಸಿನ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ.

ಗಾಳಿ ಸಮೇತ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಅಲ್ಲಲ್ಲಿ ಮರಗಳು, ವಿದ್ಯುತ್‌ ಕಂಬಗಳ ನೆಲಕಚ್ಚಿವೆ. ಮಡಿಕೇರಿ ಹಾಗೂ ವಿರಾಜಪೇಟೆ ಸಂಪರ್ಕ ಕಲ್ಪಿಸುವೆ ಭೇತ್ರಿ ಬಳಿ ಕಾವೇರಿ ನದಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ.

ಸೋಮವಾರಪೇಟೆಯ ಕೊಡ್ಲಿಪೇಟೆ ಭಾಗದಲ್ಲಿ ನಿರಂತರವಾಗಿ ಗಾಳಿ ಮಳೆ ಸುರಿಯುತ್ತಿದ್ದು, ಕೊಡ್ಲಿಪೇಟೆ ಭಾಗದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ದಿನದಲ್ಲಿ ಒಂದಡೆರು ಗಂಟೆ ಮಾತ್ರ ವಿದ್ಯುತ್‌ ಸಂಪರ್ಕ ಸಿಗುತ್ತಿದೆ.

ಜಿಲ್ಲೆಯಾದ್ಯಂತ ಮಳೆ ಮುಂದುವರೆಯುತ್ತಿರುವ ಕಾರಣ ಇಂದು ಕೂಡ ಅಂಗನವಾಡಿ, ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

Tags:
error: Content is protected !!