ಕೊಡಗು

ಈ ಜಿಲ್ಲೆಯ ಅಧಿಕಾರಿಗಳಿಗೆ 40 ದಿನ ರಜೆ ಇಲ್ಲ…!

ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ.

ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ಎಲ್ಲೂ ಹೋಗಬಾರದು. ಮಳೆಗಾಲ ಎದುರಿಸಲು ಅಧಿಕಾರಿಗಳು ಸರ್ವಸನ್ನದ್ಧರಾಗಿರಬೇಕು. ಜೊತೆಗೆ ಈ ನಿಯಮ ಚಾಚೂ ತಪ್ಪದೆ ಪಾಲಿಸಬೇಕು. 10 ದಿನಗಳ ಒಳಗೆ ಹಾಸ್ಟೆಲ್, ಶಾಲಾ ಕಟ್ಟಡದ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದರು.

ನಾಡಗೀತೆಗೆ ಅವಮಾನ: ಭೋಜೇಗೌಡ ಅಸಮಾಧಾನ
ಕೆಡಿಪಿ ಸಭೆಯಲ್ಲಿ ನಾಡಗೀತೆಗೆ ಅವಮಾನ ಮಾಡಿದ ಘಟನೆ ಸಾಕಷ್ಟು ಮುಜುಗರಕ್ಕೆ ಕಾರಣವಾಯಿತು. ಸಭೆಯ ಆರಂಭದಲ್ಲಿ ಅಧಿಕಾರಿಗಳು ನಾಡಗೀತೆಯ ರೆಕಾರ್ಡ್ ಅನ್ನು ಪ್ಲೇ ಮಾಡಿದರು. ಆದರೆ ಗೀತೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಪ್ಯಾರದ ಭಾಗವನ್ನು ಕಟ್ ಮಾಡಲಾಗಿತ್ತು. ಇದರಿಂದ ಕೆಂಡಾಮಂಡಲರಾದ ಎಂಎಲ್‌ಸಿ ಭೋಜೇಗೌಡ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಾಡಗೀತೆ ಸರಿಯಾಗಿ ಹಾಕಿಲ್ಲ. ನಿಯಮದಂತೆ ಗೀತೆಯನ್ನು ಹಾಕಬೇಕಾಗಿತ್ತು. ಹೀಗೆ ಕಟ್ ಮಾಡಿ ಎಡಿಟ್ ಮಾಡಿ ಹಾಕುವ ಬದಲು ಮಕ್ಕಳಿಂದ ಹಾಡಿಸಬಹುದಿತ್ತಲ್ಲ ಅಂತ ಖಾರವಾಗಿ ಪ್ರಶ್ನಿಸಿದರು. ಅಲ್ಲದೆ ಅಧಿಕಾರಿ ಮತ್ತು ಸಿಬ್ಬಂದಿ ಅಮಾನತ್ತಿಗೆ ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 min ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

18 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago