ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ. ದುಬಾರೆ ಸಾಕಾನೆ ಕೇಂದ್ರದ 6 ಆನೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ.
ಅಮ್ಮತ್ತಿ ಅರಣ್ಯ ಇಲಾಖೆ ಶಾಖೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯಲಿದೆ. ಕಾವಡಿ, ಹಚ್ಚಿನಾಡು, ಕಣ್ಣಗಾಲ, ಹಾಲುಗುಂದ, ಬೈರಂಬಾಡ, ಯಡೂರು, ಕರಡಿಗೋಡು, ಅಮ್ಮತ್ತಿ ಹಾಗೂ ಗುಹ್ಯ ಭಾಗಗಳಲ್ಲಿ ಕಾರ್ಯಾಚರಣೆ ನಡೆಯಲಿದೆ.
ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಎಸ್ಟೇಟ್‌ಗಳಲ್ಲಿ ಕಾರ್ಮಿಕರಿಗೆ ರಜೆ ನೀಡುವಂತೆ ಮಾಲೀಕರಿಗೆ ಸೂಚನೆ ನೀಡಲಾಗಿದೆ.
ಕಾರ್ಯಾಚರಣೆ ವೇಳೆ ಪಟಾಕಿ ಸಿಡಿಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.




