ಕೊಡಗು

ಕಾಡಿಗೆ ಕಾಡಾನೆಗಳನ್ನು ಅಟ್ಟುವ ಕಾರ್ಯಾಚರಣೆ ಯಶಸ್ವಿ

ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯಶಸ್ವಿಯಾಯಿತು.

ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ ಗುಂಪು ಸೇರಿ ಒಟ್ಟು 18 ಕಾಡಾನೆಗಳನ್ನು ಯಶಸ್ವಿಯಾಗಿ ಕಾಡಿಗೆ ಅಟ್ಟಲಾಗಿದೆ.

ಮಾಯಮುಡಿ ಗ್ರಾಮದ ಅಂಬುಕೋಟೆಯಿಂದ ಅನನ್ಯ ಗುಂಪಿಗೆ ಸೇರಿದ 07 ಕಾಡಾನೆಗಳು ಹಾಗೂ ಮಾಯಮುಡಿ ಗ್ರಾಮ ಪಂಚಾಯಿತಿ ಬಳಿಯಿಂದ 02 ಗಂಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಾಡಾನೆಗಳನ್ನು ದೇವಮಚ್ಚಿಯ ಬಳಿ ಮಾವುಕಲ್‌ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.

ಅರವತೊಕ್ಲು ಗ್ರಾಮದಲ್ಲಿ ಬೀಡುಬಿಟ್ಟಿದ್ದ NE-4 ಗುಂಪಿನ 09 ಕಾಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕಾಡಾನೆಗಳನ್ನು ನೊಖ್ಯಸಿದ್ದಾಪುರ ಗ್ರಾಮದ ಕುಂಜುರಾಮನ ಕಟ್ಟೆ ಬಳಿ ಅರಿಕೇರಿ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

8 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

9 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

9 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

10 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

16 hours ago