Mumbai
29
light rain

Social Media

ಭಾನುವಾರ, 30 ಆಗಸ್ಟ್ 2026
Light
Dark

ಅಪ್ರಾಪ್ತನಿಗೆ ದ್ವಿಚಕ್ರ ವಾಹನ ನೀಡಿದ ಪೋಷಕರಿಗೆ 30 ಸಾವಿರ ರೂ.ದಂಡ

ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ ನ್ಯಾಯ ಮಂಡಳಿ ಒಟ್ಟು 30 ಸಾವಿರ ರೂ. ದಂಡ ವಿಧಿಸಿದೆ.

ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮದ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದುದನ್ನು ಠಾಣಾಧಿಕಾರಿ ಈ.ಮಂಜುನಾಥ್ ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿರಾಜಪೇಟೆ ಪ್ರಧಾನ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಇದರೊಂದಿಗೆ ಬಾಲ ನ್ಯಾಯ ಮಂಡಳಿಯಿಂದ 5 ಸಾವಿರ ರೂ. ದಂಡ ವಿಧಿಸಲಾಗಿದ್ದು, ಒಟ್ಟು 30 ಸಾವಿರ ದಂಡವನ್ನು ಪೋಷಕರು ಪಾವತಿಸಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

Tags:
error: Content is protected !!